
ಆರ್ಬಿಐ ನಿಯಮದ ಪ್ರಕಾರ, 2 ವರ್ಷಗಳಿಗಿಂತ ಹೆಚ್ಚು ಕಾಲ ಯಾವುದೇ ವಹಿವಾಟು ನಡೆಸದಿದ್ದರೆ ಬ್ಯಾಂಕ್ ಖಾತೆ ನಿಷ್ಕ್ರಿಯವಾಗುತ್ತದೆ ಎಂದು ರಿಸರ್ವ್ ಬ್ಯಾಂಕ್ ಎಚ್ಚರಿಸಿದೆ.
ನಿಷ್ಕ್ರಿಯ ಖಾತೆಯನ್ನು ಸಕ್ರಿಯಗೊಳಿಸಲು ಗ್ರಾಹಕರು ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಆಧಾರ್, ಪ್ಯಾನ್ ಮತ್ತು ವಿಳಾಸ ಪುರಾವೆಗಳೊಂದಿಗೆ ಹೊಸದಾಗಿ ಕೆವೈಸಿ (KYC) ಸಲ್ಲಿಸಬೇಕು.
ಖಾತೆದಾರರು ಯಾವುದೇ ಥರ್ಡ್ ಪಾರ್ಟಿ ವ್ಯಕ್ತಿಗಳೊಂದಿಗೆ ಒಟಿಪಿ (OTP), ಎಟಿಎಂ ಪಿನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಪಾಸ್ವರ್ಡ್ಗಳನ್ನು ಹಂಚಿಕೊಳ್ಳಬಾರದು ಎಂದು ಆರ್ಬಿಐ ಸೂಚಿಸಿದೆ.