
ಕರ್ನಾಟಕ ಸರ್ಕಾರವು ಪಂಚ ಗ್ಯಾರಂಟಿಗಳ ಜೊತೆಗೆ ಭೂಮಿ ಹಕ್ಕು ಮತ್ತು ನೀರಿನ ಗ್ಯಾರಂಟಿ ಎಂಬ ಎರಡು ಹೊಸ ಯೋಜನೆಗಳನ್ನು ಜಾರಿಗೆ ತರಲು ಸಿದ್ಧತೆ ನಡೆಸಿದೆ.
2027ರ ಅಂತ್ಯದ ವೇಳೆಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ನೀರು ಹರಿಸಲು ಸರ್ಕಾರ ಸಂಕಲ್ಪ ಮಾಡಿದೆ.
ರಾಜ್ಯದ ಯುವಕರಿಗಾಗಿ ಭಾರತ ಜೋಡೋ ಯುವ ಶಕ್ತಿ ಸಂಘಗಳನ್ನು ರಚಿಸಲಾಗುತ್ತಿದ್ದು, ಪ್ರತಿ ಸಂಘಕ್ಕೆ ವಾರ್ಷಿಕ 10 ಲಕ್ಷ ರೂಪಾಯಿಯಂತೆ ಒಟ್ಟು 1,000 ಕೋಟಿ ಅನುದಾನ ಮೀಸಲಿಡಲಾಗಿದೆ.