
ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್‌ನಿಂದಲೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.
ಈ ಕುರಿತು ಬಿಜೆಪಿ ಹೈಕಮಾಂಡ್ ನಾಯಕರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಗುತ್ತಿಗೆದಾರರಿಗೆ ಸರ್ಕಾರ ₹38,000 ಕೋಟಿ ಬಾಕಿ ಪಾವತಿಸಬೇಕಿದೆ ಎಂದರು.