
ದುಲೀಪ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಒಟ್ಟು 132 ರನ್ ಗಳಿಸಿದ 15 ವರ್ಷದ ವೈಭವ್ ಸೂರ್ಯವಂಶಿ, ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದಾರೆ.
ಮೊದಲ ಇನಿಂಗ್ಸ್‌ನಲ್ಲಿ 92 ರನ್ ಮತ್ತು ದ್ವಿತೀಯ ಇನಿಂಗ್ಸ್‌ನಲ್ಲಿ 40 ರನ್ ಗಳಿಸಿದ ವೈಭವ್, ಪೃಥ್ವಿ ಶಾ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದರು.
ಈಸ್ಟ್ ಝೋನ್ ತಂಡವು 159 ರನ್ ಗುರಿಯನ್ನು ಬೆನ್ನಟ್ಟುತ್ತಿದ್ದು, 15 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 62 ರನ್ ಗಳಿಸಿ ಗೆಲುವಿನತ್ತ ಸಾಗುತ್ತಿದೆ.