
ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಆಹಾರ ಮತ್ತು ಪಾನೀಯ ಸೇವಾ ಸಂಸ್ಥೆಯ ಮಹಿಳಾ ಸಿಬ್ಬಂದಿಗೆ ಎಚ್ಆರ್ ವ್ಯವಸ್ಥಾಪಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.
ಸೆಪ್ಟೆಂಬರ್ 24ರಿಂದ ಎಚ್ಆರ್ ವಿಭಾಗದ ವ್ಯವಸ್ಥಾಪಕ ನೆಲ್ಸನ್ ಎಂಬುವರು ನಿರಂತರವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರತೆ ದೂರು ನೀಡಿದ್ದಾರೆ.
ಸೆಪ್ಟೆಂಬರ್ 30ರಂದು ಕೊಠಡಿಗೆ ಕರೆಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ಯುವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.