
ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ ಲೀಗ್ನಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೇವಲ 37 ಎಸೆತಗಳಲ್ಲಿ ಶತಕ ಬಾರಿಸಿ ಸಂಚಲನ ಮೂಡಿಸಿದರು.
ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು 20 ಜಯದ ಗುರಿ ನೀಡಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ 15.4 ಓವರ್ಗಳಲ್ಲಿ ಜಯಗಳಿಸಿತು.
ಡಿವಿಲಿಯರ್ಸ್ ಒಟ್ಟು 40 ಎಸೆತಗಳಲ್ಲಿ 11 ಸಿಕ್ಸರ್ ಸಹಿತ 111 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಟೂರ್ನಮೆಂಟ್ನಲ್ಲಿ ಇದು ಅವರ ಮೂರನೇ ಶತಕವಾಗಿದೆ.