
ಬಿಡದಿ ರೈತರ ಜಮೀನು ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಯಾವುದೇ ಗೊಂದಲವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ.
ಪೂರ್ವನಿಗದಿತ ಕಾರ್ಯಕ್ರಮಗಳ ಕಾರಣದಿಂದ ತಾವು ಪಾದಯಾತ್ರೆಯಲ್ಲಿ ಭಾಗವಹಿಸಿಲ್ಲವಾದರೂ, ಪಕ್ಷದ ಹಿರಿಯ ನಾಯಕರು ಸಾಂಕೇತಿಕವಾಗಿ ಬೆಂಬಲ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪರಿಶಿಷ್ಟ ಪಂಗಡದ ಅಭಿವೃದ್ಧಿ ನಿಧಿ ದುರುಪಯೋಗ ಆರೋಪ ಎದುರಿಸುತ್ತಿರುವ ಬಿ. ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿಜಯೇಂದ್ರ ತೀವ್ರವಾಗಿ ಟೀಕಿಸಿದ್ದಾರೆ.