
ನವದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಚೀನಾದ ಅಧ್ಯಕ್ಷ ಷಿ ಜಿನ್ಪಿಂಗ್, ಭಾರತ್ ಮಂಟಪದಲ್ಲಿ ಆಯೋಜಿಸಲಾಗಿದ್ದ ಅಧಿಕೃತ ಭೋಜನಕೂಟಕ್ಕೆ ಗೈರುಹಾಜರಾಗಿದ್ದಾರೆ.
ಈ ಬೆಳವಣಿಗೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ, ಅವರು ವಿಶ್ರಾಂತಿಗಾಗಿ ತಮ್ಮ ಹೋಟೆಲ್ಗೆ ಹಿಂತಿರುಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ಇತರ ಬ್ರಿಕ್ಸ್ ನಾಯಕರು ಹಾಗೂ ಗಣ್ಯರು ಈ ಭೋಜನಕೂಟದಲ್ಲಿ ಪಾಲ್ಗೊಂಡು ಭಾರತೀಯ ವಿವಿಧ ರುಚಿಗಳ ವಿಶೇಷ ಮೆನುವನ್ನು ಸವಿದರು.