
ಬಿಷ್ಕೆಕ್ನಲ್ಲಿ ನಡೆಯುತ್ತಿರುವ ಎಸ್ಸಿಒ ಶೃಂಗಸಭೆಯ ನಡುವೆ ಪ್ರಧಾನಿ ನರೇಂದ್ರ ಮೋದಿ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಅವರೊಂದಿಗೆ ಮಹತ್ವದ ದ್ವಿಪಕ್ಷೀಯ ಸಭೆ ನಡೆಸಿದರು.
ಫೆಬ್ರವರಿಯಲ್ಲಿ ಯುದ್ಧ ಆರಂಭವಾದ ನಂತರ ಉಭಯ ನಾಯಕರ ನಡುವೆ ನಡೆದ ಮೊದಲ ಮುಖಾಮುಖಿ ಸಭೆ ಇದಾಗಿದ್ದು, ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಭದ್ರತೆಯ ಬಗ್ಗೆ ಚರ್ಚಿಸಲಾಗಿದೆ.
ಮಧ್ಯ ಏಷ್ಯಾಕ್ಕೆ ಸಂಪರ್ಕ ಕಲ್ಪಿಸುವ ಅಂತಾರಾಷ್ಟ್ರೀಯ ಉತ್ತರ-ದಕ್ಷಿಣ ಸಾರಿಗೆ ಕಾರಿಡಾರ್ (INSTC) ಯೋಜನೆಗೆ ವೇಗ ನೀಡುವ ಕುರಿತು ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.