
ಬೆಂಗಳೂರಿನ ಬಸವನಗುಡಿಯ ಕೆ.ಆರ್.ರಸ್ತೆಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಮುರಳಿ ಎಂಬುವವರ ಮೇಲೆ ಹಲ್ಲೆ ನಡೆದಿದೆ.
ಘಟನೆಯಲ್ಲಿ ಗಾಯಗೊಂಡ ಮುರಳಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಿಂದೂ ಪರ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.
ದಕ್ಷಿಣ ವಿಭಾಗದ ಡಿಸಿಪಿ ವಂಶಿಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂಜಾಗ್ರತಾ ಕ್ರಮವಾಗಿ ಘಟನಾ ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.