
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಶಾಸಕ ವಿ. ಸುನಿಲ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಕಚೇರಿಗೆ ಸ್ಟಿಕ್ಕರ್ ಅಂಟಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ಸರ್ವಜ್ಞ ವೃತ್ತದ ಬಳಿ ತಡೆದು ವಶಕ್ಕೆ ಪಡೆದರು.
ಕಾಂಗ್ರೆಸ್ನ ಸ್ಟಿಕ್ಕರ್ ಅಭಿಯಾನಕ್ಕೆ ಪ್ರತಿಯಾಗಿ ಬಿಜೆಪಿ ಕಾರ್ಯಕರ್ತರು ಶಾಸಕರ ಕಚೇರಿ ಬಳಿ ಜಮಾಯಿಸಿ ಶಕ್ತಿ ಪ್ರದರ್ಶನ ನಡೆಸಿದ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.