
ರಾಯಚೂರು ನಗರದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಟ್ರ್ಯಾಕ್ಟರ್ನಿಂದ ಕೆಳಗೆ ಬಿದ್ದು ವಾಹನದಡಿ ಸಿಲುಕಿ ಇಬ್ಬರು ಬಾಲಕರು ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಹಿರಾಬಾದ್ ಬಡಾವಣೆಯಲ್ಲಿ ನಡೆದ ಮೆರವಣಿಗೆಯಲ್ಲಿ ಟ್ರ್ಯಾಕ್ಟರ್ ಇಂಜಿನ್ ಮೇಲೆ ಕುಳಿತಿದ್ದ ಸುಜಿತ್ ಕುಮಾರ್ ಮತ್ತು ಚರಣ್ ರಸ್ತೆ ಹಂಪ್ಸ್ ಬಳಿ ವಾಹನ ವೇಗವಾಗಿ ಎಗರಿಸಿದಾಗ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಟ್ರ್ಯಾಕ್ಟರ್ ಚಾಲಕ ಮುನ್ನಾ ವಿರುದ್ಧ ರಾಯಚೂರು ಸಂಚಾರ ಪೊಲೀಸ್ ಠಾಣೆಯಲ್ಲಿ ನಿರ್ಲಕ್ಷ್ಯತನದ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.