
ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಮಗಳು ನೀಡಿದ ಹೇಳಿಕೆಯ ಬೆನ್ನಲ್ಲೇ, ಅರಣ್ಯ ಸಚಿವೆ ಕೊಂಡ ಸುರೇಖಾ ಅವರನ್ನು ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.
ತಮ್ಮನ್ನು ವಜಾಗೊಳಿಸಲು ಸಿಎಂ ರೇವಂತ್ ರೆಡ್ಡಿ ಕಾಂಗ್ರೆಸ್ ಹೈಕಮಾಂಡ್‌ಗೆ ರಾಜೀನಾಮೆ ಬೆದರಿಕೆ ಹಾಕಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ಸುರೇಖಾ ಗಂಭೀರ ಆರೋಪ ಮಾಡಿದ್ದಾರೆ.
ಸಚಿವ ಸ್ಥಾನ ಕಳೆದುಕೊಂಡರೂ ಕಾಂಗ್ರೆಸ್ ಶಾಸಕಿಯಾಗಿ ಮುಂದುವರೆಯುವುದಾಗಿ ತಿಳಿಸಿರುವ ಸುರೇಖಾ, ಈ ಅನ್ಯಾಯದ ವಿರುದ್ಧ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ದೂರು ಸಲ್ಲಿಸಿದ್ದಾರೆ.