
ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು 5ನೇ ಹಣಕಾಸು ಆಯೋಗದ ವರದಿಯ ಶಿಫಾರಸುಗಳ ಅನುಷ್ಠಾನಕ್ಕೆ ಗ್ರಾಮೀಣಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
5ನೇ ರಾಜ್ಯ ಹಣಕಾಸು ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ₹1,261 ಕೋಟಿ, ತಾಲೂಕು ಪಂಚಾಯಿತಿಗಳಿಗೆ ₹557 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ₹183 ಕೋಟಿ ಬಿಡುಗಡೆ ಮಾಡಲಾಗಿದೆ.
ನಗರ ಸ್ಥಳೀಯ ಸಂಸ್ಥೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಕಾಯ್ದೆಗಳಿಗೆ ತಿದ್ದುಪಡಿ ತರಲು ನ್ಯಾಷನಲ್ ಲಾ ಕಾಲೇಜಿನ ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಅವರು ಹೇಳಿದರು.