
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ 18 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ 11 ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ.
ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣವಿದ್ದು, ಗರಿಷ್ಠ 30 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.