
ರಾಜ್ಯದ ನಗರ ಪ್ರದೇಶಗಳಲ್ಲಿರುವ ಅರ್ಹ ಬಿ ಖಾತಾ ನಿವೇಶನಗಳನ್ನು ಎ ಖಾತೆಗೆ ಪರಿವರ್ತಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಆಸ್ತಿ ಮಾಲೀಕರು ಬಾಕಿ ಇರುವ ಸಂಪೂರ್ಣ ಆಸ್ತಿ ತೆರಿಗೆ ಪಾವತಿಸಿ, ಹಕ್ಕು ಪತ್ರ ಮತ್ತು ಅನುಮೋದಿತ ನಕ್ಷೆಯಂತಹ ಅಗತ್ಯ ದಾಖಲೆಗಳನ್ನು ಸಲ್ಲಿಸಿದರೆ ಮಾತ್ರ ಎ ಖಾತೆ ಲಭ್ಯವಾಗಲಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಕ್ಕೆ 152 ಕೋಟಿ ರೂಪಾಯಿ ವೆಚ್ಚದಲ್ಲಿ 400 ಹೊಸ ಬಸ್ಗಳನ್ನು ಖರೀದಿಸಲು ಸರ್ಕಾರ ಅನುಮೋದನೆ ನೀಡಿದೆ.