
ಉತ್ತರಾಖಂಡದಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಬದರಿನಾಥ್–ರಿಷಿಕೇಶ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಶ್ರೀನಗರ ಸಮೀಪದ ಸಿರೋಬಗರ್ ಪ್ರದೇಶದಲ್ಲಿ ಬೆಟ್ಟದ ಮಣ್ಣು ಮತ್ತು ಬಂಡೆಗಳು ರಸ್ತೆಗೆ ಜಾರಿಬಿದ್ದ ಪರಿಣಾಮ ನೂರಾರು ಯಾತ್ರಿಕರ ವಾಹನಗಳು ರಸ್ತೆಯ ಎರಡೂ ಬದಿಗಳಲ್ಲಿ ಸಿಲುಕಿವೆ.
ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳದಲ್ಲಿ ತೆರವು ಕಾರ್ಯ ಆರಂಭಿಸಿದ್ದು, ಯಾತ್ರಿಕರು ಅನಗತ್ಯ ಪ್ರಯಾಣ ತಪ್ಪಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.