
ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಶಾಲಾ ಬಾಲಕನೊಬ್ಬ ತಮ್ಮ ಊರಿನ ರಸ್ತೆ ಗುಂಡಿಗಳ ದುರವಸ್ಥೆಯನ್ನು ರೀಲ್ಸ್ ಮೂಲಕ ವಿವರಿಸಿದ್ದಾನೆ.
ಹಾರೋಬೆಳವಡಿಯಿಂದ ಆಯಟ್ಟಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗಿದೆ ಎಂದು ವಿದ್ಯಾರ್ಥಿ ತಿಳಿಸಿದ್ದಾನೆ.
ಸಂಬಂಧಪಟ್ಟ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸಬೇಕೆಂದು ಬಾಲಕ ವಿನಂತಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.