
ಕಾಂಗ್ರೆಸ್ ಪಕ್ಷದಿಂದ ವಿಧಾನ ಪರಿಷತ್ ಸದಸ್ಯ ಸ್ಥಾನ ಕೊಡಿಸುವುದಾಗಿ ನಂಬಿಸಿ ಮಂಗಳೂರಿನ ಸಮಾಜಸೇವಕಿಗೆ 1.50 ಕೋಟಿ ರೂ. ವಂಚಿಸಿದ ಆರೋಪದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ಯರಿಸ್ವಾಮಿ ತಾನು ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡು, 2024ರ ಆಗಸ್ಟ್ನಿಂದ 2025ರ ಜನವರಿವರೆಗೆ ವಿವಿಧ ಹಂತಗಳಲ್ಲಿ ಹಣ ಪಡೆದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೆಹಲಿ ಪ್ರವಾಸದ ವೇಳೆ ಆರೋಪಿ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಹಣ ವಾಪಸ್ ಕೇಳಿದಾಗ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.