
ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಆರೋಪಗಳ ವಿರುದ್ಧ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯಲಿರುವ 'ಇಂಡಿಯಾ' ಒಕ್ಕೂಟದ ರ್ಯಾಲಿಗೆ 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ) ಬೆಂಬಲ ಘೋಷಿಸಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಮತ್ತೊಮ್ಮೆ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನಂಬಿಕೆಯನ್ನು ಮರುಸ್ಥಾಪಿಸಲು ಸಿಜೆಪಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಲಾಗಿದೆ.