
ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ಕಾರವಾರ ಮೆಡಿಕಲ್ ಕಾಲೇಜು ಮತ್ತು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯ ಪ್ರಮುಖ ರಸ್ತೆಗೆ ಅವರ ಹೆಸರಿಡುವುದಾಗಿ ಸಿಎಂ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಮೂಲಕ ಪ್ರತಿ ವರ್ಷ ಅತ್ಯುತ್ತಮ ಪಂಚಾಯತ್ಗೆ 'ರಾಮಕೃಷ್ಣ ಹೆಗಡೆ ಶ್ರೇಷ್ಠ ಪಂಚಾಯಿತಿ ಪ್ರಶಸ್ತಿ' ನೀಡುವ ಕಾರ್ಯಕ್ರಮವನ್ನು ರೂಪಿಸಲು ಸರ್ಕಾರ ನಿರ್ಧರಿಸಿದೆ.
1982-87ರ ಅವಧಿಯಲ್ಲಿ ರಾಜ್ಯದ ಬಜೆಟ್ ಗಾತ್ರ ₹3,687 ಕೋಟಿ ಇದ್ದರೆ, ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಅದು ₹4.50 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಸಿಎಂ ಅಂಕಿಅಂಶಗಳನ್ನು ಉಲ್ಲೇಖಿಸಿದರು.