
ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಪತ್ತೆಯಾದ ಬೃಹತ್ ನಕಲಿ ಔಷಧ ಜಾಲದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು, ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಒಪ್ಪಿಸಿ ಆದೇಶ ಹೊರಡಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಸಿ. ವಂಶಿಕೃಷ್ಣ ನೇತೃತ್ವದ ಈ ಎಸ್‌ಐಟಿ ತಂಡದಲ್ಲಿ ಐಪಿಎಸ್ ಅಧಿಕಾರಿಗಳಾದ ಶಿವಪ್ರಕಾಶ್, ಲೋಕೇಶ್ ಮತ್ತು ಸಹಾಯಕ ಔಷಧ ನಿಯಂತ್ರಕ ಮಂಜುನಾಥ್ ರೆಡ್ಡಿ ಸೇರಿದಂತೆ ಹಲವು ತಜ್ಞರಿದ್ದಾರೆ.
ಆಗಸ್ಟ್ 18ರಂದು ಬಿದದಿ ಸಮೀಪದ ಕುರುಬರಹಳ್ಳಿಯಲ್ಲಿ ಪರವಾನಗಿ ಇಲ್ಲದ ಘಟಕದ ಮೇಲೆ ದಾಳಿ ನಡೆಸಿ 5,05,49,575 ರೂಪಾಯಿ ಮೌಲ್ಯದ ನಕಲಿ ಔಷಧಗಳು, ಯಂತ್ರಗಳು ಮತ್ತು ಲೇಬಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.