
ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 16 ರಿಂದ 20 ರವರೆಗೆ ಭಾರೀ ಮಳೆಯಾಗಲಿದೆ.
ಬೆಂಗಳೂರು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಅಕ್ಟೋಬರ್ 15 ರಿಂದ 20 ರವರೆಗೆ ಅಲ್ಲಲ್ಲಿ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ.
ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.