
ಬೆಂಗಳೂರಿನ ಸುಬ್ಬಯ್ಯ ಸರ್ಕಲ್ನಲ್ಲಿ ಫುಟ್ಪಾತ್ ಒತ್ತುವರಿ ತೆರವುಗೊಳಿಸಿದ್ದ ಜಾಗದಲ್ಲೇ ಕಟ್ಟಡ ನಿರ್ಮಾಣ ತ್ಯಾಜ್ಯವನ್ನು ಸಂಗ್ರಹಿಸಿದ್ದ ಮಾಲೀಕನಿಗೆ ಜಿಬಿಎ ಅಧಿಕಾರಿಗಳು 50,000 ರೂ. ದಂಡ ವಿಧಿಸಿದ್ದಾರೆ.
ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಪಡಿಸಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಕಟ್ಟಡದ ಮಾಲೀಕ ಪ್ರಭು ಅವರಿಗೆ ಈ ದಂಡವನ್ನು ಹೇರಲಾಗಿದೆ.
ಪಾದಚಾರಿಗಳ ಸುರಕ್ಷತೆ ಮತ್ತು ನಗರದ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಜಿಬಿಎ ಅಧಿಕಾರಿಗಳು ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.