
ಕರ್ನಾಟಕದಲ್ಲಿ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಅವರ ಸಮಸ್ಯೆಗಳನ್ನು ಪರಿಶೀಲಿಸಿ ಪರಿಹಾರ ಶಿಫಾರಸು ಮಾಡಲು ಕೇಂದ್ರ ಸರ್ಕಾರ ಸಮಿತಿ ರಚಿಸಿದೆ.
ನೀತಿ ಆಯೋಗದ ಮಾಜಿ ಸದಸ್ಯ ಪ್ರೊ. ರಮೇಶ್ ಚಂದ್ ನೇತೃತ್ವದ ಈ ಸಮತಿಯು ಲಾಭದಾಯಕ ಬೆಲೆ, ಸಕ್ಕರೆ ಕನಿಷ್ಠ ಮಾರಾಟ ಬೆಲೆ (MSP) ಹಾಗೂ ಕಬ್ಬಿನ ತೂಕದ ಪದ್ಧತಿಗಳನ್ನು ಪರಿಶೀಲಿಸಲಿದೆ.
ಸಮತಿಯು ರೈತ ಪ್ರತಿನಿಧಿಗಳು, ಸಕ್ಕರೆ ಕಾರ್ಖಾನೆಗಳು ಮತ್ತು ರಾಜ್ಯ ಸರ್ಕಾರಗಳೊಂದಿಗೆ ಸಮಾಲೋಚನೆ ನಡೆಸಿ ಆರ್ಥಿಕ ಪರಿಣಾಮಗಳ ಕುರಿತು ಮೌಲ್ಯಮಾಪನ ಮಾಡಲಿದೆ.