
ಕಬ್ಬು ನುರಿಸುವ ಹಂಗಾಮು ಸಮೀಪಿಸುತ್ತಿದ್ದಂತೆ ಬಾಗಲಕೋಟೆಯಲ್ಲಿ ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 5,500 ರೂ ಬೆಲೆ ನಿಗದಿಪಡಿಸಬೇಕೆಂದು ಪಟ್ಟು ಹಿಡಿದು ಹೋರಾಟದ ಹಾದಿ ಹಿಡಿದಿದ್ದಾರೆ.
ಬೆಲೆ ಘೋಷಣೆ ಮಾಡಿದ ನಂತರವೇ ನವೆಂಬರ್ನಲ್ಲಿ ಕಾರ್ಖಾನೆಗಳನ್ನು ಆರಂಭಿಸಬೇಕು ಎಂದು ಎಚ್ಚರಿಕೆ ನೀಡಿರುವ ರೈತರು, ಬೈಕ್ ರ್ಯಾಲಿಗಳ ಮೂಲಕ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸುತ್ತಿದ್ದಾರೆ.
ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಸೆಪ್ಟೆಂಬರ್ 29ಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹುಬ್ಬಳ್ಳಿಯ ನಿವಾಸಕ್ಕೆ ಮುತ್ತಿಗೆ ಹಾಕಲು ರೈತರು ನಿರ್ಧರಿಸಿದ್ದಾರೆ.