
ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಅಕ್ಟೋಬರ್ 16ರಿಂದ ಮುಂದಿನ ಮೂರು ದಿನಗಳ ಕಾಲ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಕೋಲಾರ, ರಾಮನಗರ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ.
ಮಳೆಯ ಜೊತೆಗೆ ಗಂಟೆಗೆ 30 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.