
ಶಿರಸಿಯ ದೊಡ್ನಳ್ಳಿ ಗ್ರಾಮದ ಬಾವಿಗಳಲ್ಲಿ ನೀರು ಕಪ್ಪು ಬಣ್ಣಕ್ಕೆ ತಿರುಗಿದ್ದು, ಅದಕ್ಕೆ ಬೆಂಕಿ ಹಚ್ಚಿದರೆ ಉರಿಯುವಂತಹ ವಿಚಿತ್ರ ವಿದ್ಯಮಾನ ಬೆಳಕಿಗೆ ಬಂದಿದೆ.
ಆರು ಬಾವಿಗಳ ನೀರು ಕಲುಷಿತಗೊಂಡಿದ್ದು, ಪವರ್ ಗ್ರಿಡ್ನಿಂದ ಆಯಿಲ್ ಸೋರಿಕೆಯಾಗಿರಬಹುದು ಎಂದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.
ಪ್ರಾಥಮಿಕ ವರದಿಯಲ್ಲಿ ನೀರು ಕುಡಿಯಲು ಯೋಗ್ಯವಲ್ಲ ಎಂದು ತಿಳಿದುಬಂದಿದ್ದು, ಗ್ರಾಮ ಪಂಚಾಯತ್ ಟ್ಯಾಂಕರ್ ಮೂಲಕ ನೀರು ಪೂರೈಸುತ್ತಿದೆ.