
ಬಿಹಾರದ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡುತ್ತಿದ್ದಾಗ ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ಮೋದಿ ಪರ ಘೋಷಣೆ ಕೂಗಿ ಅಡ್ಡಿಪಡಿಸಿದ್ದಾರೆ.
ಖರ್ಗೆಯವರ ಭಾಷಣದ ವೇಳೆ ವ್ಯಕ್ತಿಯೊಬ್ಬರು ಮಧ್ಯಪ್ರವೇಶಿಸಿ ಮೋದಿ ಪರ ಕೂಗಿದಾಗ ಸಭಾಂಗಣದಲ್ಲಿ ಕೆಲಕಾಲ ಗೊಂದಲ ಹಾಗೂ ತೀವ್ರ ಗದ್ದಲ ಉಂಟಾಗಿದೆ.
ಮಧ್ಯಪ್ರವೇಶಿಸಿ ಘೋಷಣೆ ಕೂಗಿದ ವ್ಯಕ್ತಿಯನ್ನು ಸ್ಥಳದಲ್ಲಿದ್ದ ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರು ಸಮಾಧಾನಪಡಿಸಲು ಪ್ರಯತ್ನಿಸಿದ್ದಾರೆ.