
ಬಂಗಾಳಕೊಲ್ಲಿಯ ವಾಯುಭಾರ ಕುಸಿತ ಮತ್ತು ನೈಋತ್ಯ ಮುಂಗಾರು ನಿರ್ಗಮದಿಂದ ರಾಜ್ಯಕ್ಕೆ ಹಿಂಗಾರು ಪ್ರವೇಶಿಸಿದ್ದು, ಅಕ್ಟೋಬರ್ 13ರಿಂದ ಮುಂದಿನ ನಾಲ್ಕು ದಿನಗಳ ಕಾಲ 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ಮಳೆಯ ಅಬ್ಬರ ಹೆಚ್ಚಿರುವ ಮುನ್ನೆಚ್ಚರಿಕೆಯಾಗಿ ಹವಾಮಾನ ಇಲಾಖೆಯು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಲಿದ್ದು ಗರಿಷ್ಠ 31 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ, ಹಾಗೂ ಅಕ್ಟೋಬರ್ 15ರ ನಂತರ ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ.