ಕೇರಳದಲ್ಲಿ ಶನಿವಾರ ಸುರಿದ ಭಾರಿ ಮಳೆಯಿಂದಾಗಿ ಉಂಟಾದ ಪ್ರವಾಹ ಮತ್ತು ಭೂಕುಸಿತದ ಅವಘಡಗಳಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.
ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ ಮತ್ತು ಪತ್ತನಂತಿಟ್ಟ ಜಿಲ್ಲೆಗಳಲ್ಲಿ ಹೆಚ್ಚು ಹಾನಿಯಾಗಿದ್ದು, ಇಡುಕ್ಕಿ ಜಿಲ್ಲೆಯ ಅಡೂರ್ಮಲಾದಲ್ಲಿ 65 ವರ್ಷದ ಸುಮತಿ ಮತ್ತು ವಾಗಮೋನ್ನಲ್ಲಿ 77 ವರ್ಷದ ಪ್ರಭಾಕರನ್ ನಾಯರ್ ಮೃತಪಟ್ಟಿದ್ದಾರೆ.
ಭಾರತೀಯ ಹವಾಮಾನ ಇಲಾಖೆಯು ಭಾನುವಾರವೂ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಶಬರಿಮಲೆಗೆ ಭೇಟಿ ನೀಡದಂತೆ ಭಕ್ತರಿಗೆ ದೇವಸ್ವಂ ಮಂಡಳಿ ಮನವಿ ಮಾಡಿದೆ.