
ನಟ ವಿಜಯ್ ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಆಗಸ್ಟ್ 21ರಿಂದ ಜೀ5 ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಪ್ರಸಾರವಾಗಲಿದೆ ಎಂದು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.
ಹೆಚ್ ವಿನೋದ್ ನಿರ್ದೇಶನದ ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಬಾಬಿ ಡಿಯೋಲ್ ಮತ್ತು ಮಮಿತಾ ಬೈಜು ಮುಖ್ಯ ಭೂಮಿಕೆಯಲ್ಲಿದ್ದು, ಜುಲೈ 23ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು.
ಸೆನ್ಸಾರ್ ಮಂಡಳಿಯ ತಾಂತ್ರಿಕ ಕಾರಣಗಳಿಂದಾಗಿ ಜನವರಿ 9ರ ಬದಲಿಗೆ ತಡವಾಗಿ ಬಿಡುಗಡೆಯಾದ ಈ ಚಿತ್ರಕ್ಕೆ 'ಎ' ಸರ್ಟಿಫಿಕೇಟ್ ದೊರೆತಿದ್ದು, ಮಿಶ್ರ ಪ್ರತಿಕ್ರಿಯೆ ಪಡೆದಿತ್ತು.