
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 9ರ ಮಧ್ಯರಾತ್ರಿ 12ರಿಂದ ಅಕ್ಟೋಬರ್ 11ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ.
ಮಹಿಷಾಸುರ ಪ್ರತಿಮೆಯ 200 ಮೀಟರ್ ವ್ಯಾಪ್ತಿಯಲ್ಲಿ ಈ ನಿಷೇಧಾಜ್ಞೆ ಅನ್ವಯಿಸಲಿದ್ದು, ಚಾಮುಂಡಿ ಬೆಟ್ಟದಲ್ಲಿ ವಾಸಿಸುವವರಿಗೆ ಇದು ಅನ್ವಯಿಸುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಆಚರಣೆಯ ಪರ ಹಾಗೂ ವಿರೋಧ ಪಕ್ಷಗಳಲ್ಲಿ ಭಿನ್ನಾಭಿಪ್ರಾಯವಿದ್ದು, ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇರುವುದರಿಂದ ಗುಪ್ತವಾರ್ತೆ ಮಾಹಿತಿಯ ಮೇರೆಗೆ ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.