
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ಏಷ್ಯಾಕಪ್ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಉಭಯ ತಂಡಗಳ ನಡುವೆ ಇದುವರೆಗೆ ನಡೆದ 21 ಟಿ20 ಪಂದ್ಯಗಳಲ್ಲಿ ಭಾರತ 18ರಲ್ಲಿ ಗೆಲುವು ಸಾಧಿಸಿದ್ದು, ಈ ಪಂದ್ಯದ ವಿಜೇತರು ನೇರವಾಗಿ ಫೈನಲ್ಗೆ ಪ್ರವೇಶ ಪಡೆಯಲಿದ್ದಾರೆ.