
ಬಿಹಾರದ ಗಂಗಾ ನದಿಯಲ್ಲಿ 21 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ನಿಯಂತ್ರಣ ತಪ್ಪಿ ಮಗುಚಿದ ಪರಿಣಾಮ ಇಬ್ಬರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ಸ್ಥಳೀಯ ಮೀನುಗಾರರು ಮತ್ತು ಗ್ರಾಮಸ್ಥರು ತಕ್ಷಣ ಸ್ಪಂದಿಸಿ ದೋಣಿಯಲ್ಲಿದ್ದ 19 ಜನರನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.
ನಾಪತ್ತೆಯಾದವರಿಗಾಗಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ನದಿಯಲ್ಲಿ ತೀವ್ರ ಶೋಧ ಕಾರ್ಯವನ್ನು ನಡೆಸುತ್ತಿವೆ.