
ಮುಂಬೈನ ಜುಹೂ ಪ್ರದೇಶದಲ್ಲಿ ಫುಟ್ಬಾಲ್ ಆಡಿ ಮರಳುತ್ತಿದ್ದ ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಬಲಗೈಗೆ ಬ್ಯಾಂಡೇಜ್ ಹಾಕಿಕೊಂಡಿರುವ ನಟನ ವಿಡಿಯೋ ವೈರಲ್ ಆಗಿದೆ.
ಈ ಭೀಕರ ದಾಳಿಯಲ್ಲಿ ನಟನ ಚಾಲಕ ಮತ್ತು ಆಟೋ ಚಾಲಕ ಗಾಯಗೊಂಡಿದ್ದು, ಘಟನೆಯ ಹೊಣೆಯನ್ನು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೊತ್ತುಕೊಂಡಿದೆ ಎಂದು ಹೇಳಲಾಗಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನಟನ ನಿವಾಸಕ್ಕೆ ಭೇಟಿ ನೀಡಿ ಗಂಭೀರ ಆತಂಕ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣ ನಿರ್ಮೂಲನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.