
ಪಶ್ಚಿಮ ಬಂಗಾಳದ ನಂದಿಗ್ರಾಮ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ಗೆ ಹೈಕೋರ್ಟ್ ಅಕ್ಟೋಬರ್ 21ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ನ್ಯಾಯಮೂರ್ತಿ ತೀರ್ಥಂಕರ ಘೋಷ್ ಅವರ ಪೀಠವು 20,000 ರೂಪಾಯಿ ಮೌಲ್ಯದ ಬಾಂಡ್ ಆಧಾರದ ಮೇಲೆ ಈ ಜಾಮೀನು ನೀಡಿದ್ದು, ಜೈಲಿನಿಂದ ಹೊರಬಂದು ಪ್ರಚಾರ ನಡೆಸಲು ಹಾದಿ ಸುಗಮವಾಗಿದೆ.
ನಂದಿಗ್ರಾಮ ಉಪಚುನಾವಣೆಗೆ ಅಕ್ಟೋಬರ್ 6ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 4ರ ಸಂಜೆ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಲಿದೆ.