
ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮತ್ತು ತಂತ್ರಜ್ಞಾನದ ಗರಿಷ್ಠ ಬಳಕೆಗೆ ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ ನೇತೃತ್ವದಲ್ಲಿ ಹೈ-ಪವರ್ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.
ಈ ಸಮಿತಿಯಲ್ಲಿ ಇಸ್ರೋ ಮಾಜಿ ಅಧ್ಯಕ್ಷ ಎಸ್. ಸೋಮನಾಥ್, ಐಐಟಿ ಮದ್ರಾಸ್ ನಿರ್ದೇಶಕ ವಿ. ಕಾಮಕೋಟಿ, ಮಾಜಿ ಐಬಿ ನಿರ್ದೇಶಕ ತಪನ್ ದೇಕಾ ಸೇರಿದಂತೆ ಆರು ಮಂದಿ ತಜ್ಞರು ಸದಸ್ಯರಾಗಿದ್ದಾರೆ.
ಪರೀಕ್ಷಾ ಪದ್ಧತಿಯಲ್ಲಿನ ತಾಂತ್ರಿಕ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಕುರಿತು ಈ ಸಮಿತಿ ವರದಿ ನೀಡಲಿದ್ದು, ಅದರ ಆಧಾರದ ಮೇಲೆ ಮುಂಬರುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ.