
ತಮಿಳುನಾಡು ಸರ್ಕಾರವು ಕಲ್ಲು, ಎಂ-ಸ್ಯಾಂಡ್ ಮತ್ತು ಜಲ್ಲಿಕಲ್ಲುಗಳ ರಫ್ತನ್ನು ನೆರೆಯ ರಾಜ್ಯಗಳಿಗೆ ಮೂರು ತಿಂಗಳ ಕಾಲ ನಿಷೇಧಿಸಿ ಆದೇಶ ಹೊರಡಿಸಿದೆ.
ಈ ನಿರ್ಧಾರದಿಂದ ಕರ್ನಾಟಕದ ಬೆಂಗಳೂರು ಸೇರಿದಂತೆ ನೆರೆಯ ರಾಜ್ಯಗಳ ಮೂಲಸೌಕರ್ಯ ಯೋಜನೆಗಳು ಮತ್ತು ರಿಯಲ್ ಎಸ್ಟೇಟ್ ವಲಯದ ಮೇಲೆ ತೀವ್ರ ಪರಿಣಾಮ ಬೀರಲಿದೆ.
ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದ್ದು, ನಿಯಮ ಉಲ್ಲಂಘಿಸುವ ವಾಹನಗಳನ್ನು ಜಪ್ತಿ ಮಾಡಿ ದಂಡ ವಿಧಿಸುವುದಾಗಿ ತಮಿಳುನಾಡು ಸರ್ಕಾರ ಎಚ್ಚರಿಸಿದೆ.