
ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯ ಮುಳುಗಡೆ ಸಂತ್ರಸ್ತ ರೈತರಿಗೆ 2-3 ಹಂತಗಳಲ್ಲಿ ಶೀಘ್ರವೇ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ರಾಜ್ಯದ ನೀರಾವರಿ ಯೋಜನೆಗಳಿಗಾಗಿ ಬಜೆಟ್ನಲ್ಲಿ 16 ಸಾವಿರ ಕೋಟಿ ರೂ. ಮೀಸಲಿಡಲಾಗಿದ್ದು, ಎತ್ತಿನಹೊಳೆ ಯೋಜನೆಯನ್ನು 2027ರ ಒಳಗೆ ಪೂರ್ಣಗೊಳಿಸಿ ನೀರು ಹರಿಸುವ ಗುರಿ ಹೊಂದಲಾಗಿದೆ.
ಯೋಜನೆಯ ಅಧಿಸೂಚನೆ ಹೊರಡಿಸಲು ಮತ್ತು ಆಣೆಕಟ್ಟು ಎತ್ತರ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತಕರಾರು ಪ್ರಕರಣಗಳನ್ನು ಬಗೆಹರಿಸಲು ವಿಶೇಷ ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.