
ಹಳೆಯ ಪಿಂಚಣಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಕಾನೂನಾತ್ಮಕ ಹಾಗೂ ಸಂವಿಧಾನಾತ್ಮಕ ತೊಡಕುಗಳಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದ ಶಿಕ್ಷಕರ ಮನವಿ ಸ್ವೀಕರಿಸಿ ಸಮಸ್ಯೆ ಪರಿಹರಿಸುವ ಭರವಸೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಒಪಿಎಸ್ ಜಾರಿಗೆ ಅಗತ್ಯ ಪ್ರಯತ್ನ ಮುಂದುವರಿಯಲಿದೆ ಎಂದಿದ್ದಾರೆ.
ಕಲಬುರಗಿ ಮಹಾನಗರದಲ್ಲಿ ಶಿಕ್ಷಕರ ಸಮುದಾಯದ ಬೇಡಿಕೆಯಂತೆ ಸುಮಾರು 23 ಸಾವಿರ ಚದರ ಅಡಿ ವಿಸ್ತೀರ್ಣದ, ₹2.34 ಕೋಟಿ ಮೌಲ್ಯದ ಜಾಗವನ್ನು ಸಿಎ ನಿವೇಶನವಾಗಿ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.