
ಚಿಕ್ಕಮಗಳೂರು ಜಿಲ್ಲೆಯ ಕಡೂರು ಪಟ್ಟಣದ ಹೊರವಲಯದ ಗೆದ್ಲೇಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕಟ್ಟಡಕ್ಕೆ ಬಣ್ಣ ಬಳಿಯುತ್ತಿದ್ದ ಉತ್ತರ ಪ್ರದೇಶದ ಕಾರ್ಮಿಕರೊಬ್ಬರು ನಾಲ್ಕನೇ ಅಂತಸ್ತಿನಿಂದ ಬಿದ್ದು ಮೃತಪಟ್ಟಿದ್ದಾರೆ.
ಮೃತರನ್ನು ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ನೋಹಿ ಗ್ರಾಮದ ಧರ್ಮೇಂದ್ರಸಿಂಗ್ (ಉಮೇಂದ್ರ) (29) ಎಂದು ಗುರುತಿಸಲಾಗಿದ್ದು, ಕೆಲಸ ಮಾಡುವಾಗ ಹಗ್ಗ ಕೈಜಾರಿ ಬಿದ್ದಿದ್ದರಿಂದ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು.
ಗಾಯಾಳುವನ್ನು ಕಡೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಮಗಳೂರಿಗೆ ಆಂಬುಲೆನ್ಸ್ ಮೂಲಕ ಕರೆದೊಯ್ಯುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.