
ಬಿಹಾರದ ಪಾಟ್ನಾದಲ್ಲಿ ನಡೆದ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಅಯೋಧ್ಯೆ ರಾಮಮಂದಿರ ದೇಣಿಗೆ ಹಣವನ್ನು ಲೂಟಿ ಮಾಡಿದವರಿಗೆ ಕಠಿಣ ಶಿಕ್ಷೆಯಾಗಲಿ ಎಂದು ಪ್ರಾರ್ಥಿಸಿದ್ದಾರೆ.
ಅಯೋಧ್ಯೆ ರಾಮಮಂದಿರದಲ್ಲಿ ಭಕ್ತರು ನೀಡಿದ್ದ ದೇಣಿಗೆಯನ್ನು ಎಣಿಕೆ ಸಿಬ್ಬಂದಿಯೇ ಕದ್ದಿರುವ ಪ್ರಕರಣವನ್ನು ಅವರು ಪ್ರಸ್ತಾಪಿಸಿ ಬಿಜೆಪಿ ಹಾಗೂ ಆರ್&ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.
ಇದೇ ವೇಳೆ ಸಮಾಜವಾದಿ ನಾಯಕ ನಿತೀಶ್ ಕುಮಾರ್ ಅವರು ಆರ್&ಎಸ್‌ಎಸ್ ಸಿದ್ಧಾಂತದವರೊಂದಿಗೆ ಕೈಜೋಡಿಸಿರುವುದು ತಮಗೆ ತೀವ್ರ ನೋವುಂಟು ಮಾಡಿದೆ ಎಂದು ಖರ್ಗೆ ಬೇಸರ ವ್ಯಕ್ತಪಡಿಸಿದರು.