Indian Politics
ರೋಹಿಣಿ ಸಿಂಧೂರಿ ವಿರುದ್ಧ ತನಿಖೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

prajavani1h
THE BRIEF
1

ಪರಿಸರಸ್ನೇಹಿ ಬಟ್ಟೆಯ ಕೈಚೀಲಗಳ ಖರೀದಿಯಲ್ಲಿ ಅಕ್ರಮ ಎಸಗಿದ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ತನಿಖೆಗೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

2

ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ₹13 ಮೌಲ್ಯದ ಚೀಲಗಳನ್ನು ₹52ಕ್ಕೆ ಖರೀದಿಸಿ ಸರ್ಕಾರದ ಬೊಕ್ಕಸಕ್ಕೆ ₹7.65 ಕೋಟಿ ನಷ್ಟ ಉಂಟುಮಾಡಲಾಗಿದೆ ಎಂದು ದೂರುದಾರ ಎನ್.ಆರ್. ರವಿಚಂದ್ರೇಗೌಡ ಆರೋಪಿಸಿದ್ದಾರೆ.

3

ಈ ಪ್ರಕರಣದಲ್ಲಿ ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ಅಡಿಯಲ್ಲಿ ಕ್ರಿಮಿನಲ್ ಮೊಕದ್ದಮೆ ಹೂಡಲು ಹೈಕೋರ್ಟ್ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಸಿಂಧೂರಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.