
ನೇಪಾಳದಲ್ಲಿ ಭೀಕರ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 1,355ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಸೋಮವಾರವೂ ಮುಂದುವರಿದಿದೆ.
ಪ್ರವಾಹದಲ್ಲಿ 13,396 ಜನರನ್ನು ರಕ್ಷಿಸಲಾಗಿದ್ದು, 589 ವಿದೇಶಿ ಪ್ರಜೆಗಳು ಸೇರಿದಂತೆ ಇನ್ನೂ 4,996 ಮಂದಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಭಾರತ ಮತ್ತು ಚೀನಾದ ತಜ್ಞರ ತಂಡಗಳು ರಕ್ಷಣಾ ಕಾರ್ಯದಲ್ಲಿ ನೆರವು ನೀಡುತ್ತಿದ್ದು, ಕಾಳಜಿ ಕೇಂದ್ರಗಳಲ್ಲಿರುವ ಮಕ್ಕಳಿಗೆ ಆಹಾರದ ಕೊರತೆ ಉಂಟಾಗಿದೆ.