
ಆಸ್ಟ್ರೇಲಿಯಾದ ವೇಗಿ ಮಿಚೆಲ್ ಸ್ಟಾರ್ಕ್ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದ ಮೊದಲ ಎಸೆತದಲ್ಲೇ ವಿಕೆಟ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ 4 ಬಾರಿ ಈ ಸಾಧನೆ ಮಾಡಿದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.
ಈ ಪಂದ್ಯದಲ್ಲಿ ಕೇವಲ 22 ಎಸೆತಗಳಲ್ಲಿ 5 ವಿಕೆಟ್ ಕಬಳಿಸಿದ ಸ್ಟಾರ್ಕ್, ಡೇಲ್ ಸ್ಟೇನ್ ಅವರ 439 ವಿಕೆಟ್‌ಗಳ ದಾಖಲೆಯನ್ನು ಮುರಿದು ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್-10 ಬೌಲರ್‌ಗಳ ಪಟ್ಟಿಗೆ ಸೇರಿದ್ದಾರೆ.
ಈ ಸಾಧನೆಯೊಂದಿಗೆ ಸ್ಟಾರ್ಕ್ ವೆಸ್ಟ್ ಇಂಡೀಸ್‌ನ ಪೆಡ್ರೊ ಕಾಲಿನ್ಸ್ ಅವರ 3 ಬಾರಿ ಮೊದಲ ಎಸೆತದಲ್ಲಿ ವಿಕೆಟ್ ಪಡೆದಿದ್ದ ಹಿಂದಿನ ವಿಶ್ವ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.