
ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ. 7ರಷ್ಟು ಆಂತರಿಕ ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಿದ ಸಿಎಂ, ಶಿಕ್ಷಕರ ಹೆಸರಿನ ಮುಂದೆ ಗೌರವಾರ್ಥವಾಗಿ 'Tr' ಎಂದು ಸಂಬೋಧಿಸಲು ಸರ್ಕಾರ ತೀರ್ಮಾನಿಸಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ಈಗಾಗಲೇ 102 ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದ್ದು, ಶೀಘ್ರದಲ್ಲೇ ಎರಡನೇ ಪಟ್ಟಿಯಲ್ಲಿ ಇನ್ನೂ 50ಕ್ಕೂ ಹೆಚ್ಚು ತಾಲೂಕುಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದರು.