
ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಫಲಾನುಭವಿಯೂ ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಆಹಾರ ಇಲಾಖೆ ಸೂಚನೆ ನೀಡಿದೆ.
ನಿಗದಿತ ಸಮಯದೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ, ಅಂತಹ ಸದಸ್ಯರ ಹೆಸರುಗಳನ್ನು ಪಡಿತರ ಚೀಟಿಯಿಂದ ತಾತ್ಕಾಲಿಕವಾಗಿ ತಡೆಹಿಡಿಯುವ ಸಾಧ್ಯತೆಯಿದ್ದು, ಮುಂದಿನ ತಿಂಗಳಿಂದ ಉಚಿತ ಅಕ್ಕಿ ಸ್ಥಗಿತಗೊಳ್ಳಬಹುದು.
ಇ-ಕೆವೈಸಿ ಪ್ರಕ್ರಿಯೆಯನ್ನು ನಿಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಮಾಡಿಸಬಹುದು ಅಥವಾ ಆಧಾರ್‌ಗೆ ಮೊಬೈಲ್ ಸಂಖ್ಯೆ ಲಿಂಕ್ ಆಗಿದ್ದರೆ Mera Ration ಹಾಗೂ Aadhaar FaceRD ಆ್ಯಪ್‌ಗಳ ಮೂಲಕ ಮನೆಯಲ್ಲೇ ಪೂರ್ಣಗೊಳಿಸಬಹುದು.