
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟವು ರಾಮನಗರದ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂಪಾರ್ಕ್ ವರೆಗೆ ಮೂರು ದಿನಗಳ ಪಾದಯಾತ್ರೆಗೆ ಚಾಲನೆ ನೀಡಿದೆ.
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಆರ್. ಅಶೋಕ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆಯಲ್ಲಿ ಸಾವಿರಾರು ರೈತರು ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಭಾಗಿಯಾಗಿದ್ದಾರೆ.
ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರ ರೈತರ ಭೂಮಿಯನ್ನು ಕಬಳಿಸಲು ಯೋಜನೆ ರೂಪಿಸಿದೆ ಎಂದು ಆರೋಪಿಸಿ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದ್ದಾರೆ.