
ಸೊರಬ ತಾಲ್ಲೂಕಿನ ಆನವಟ್ಟಿಯಲ್ಲಿ ₹1.02 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಮಧು ಬಂಗಾರಪ್ಪ ಭೂಮಿಪೂಜೆ ನೆರವೇರಿಸಿದ್ದಾರೆ.
ಕೆಪಿಎಸ್ ಶಾಲೆಯಲ್ಲಿ ₹50 ಲಕ್ಷ ವೆಚ್ಚದಲ್ಲಿ ರಂಗಮಂದಿರ ನಿರ್ಮಾಣ ಮತ್ತು ಸರ್ಕಾರಿ ಕಾಲೇಜಿನ ಬಳಿ ₹22.50 ಲಕ್ಷ ವೆಚ್ಚದಲ್ಲಿ ಸಮುದಾಯ ಶೌಚಾಲಯ ನಿರ್ಮಾಣ ಕಾಮಗಾರಿಗಳು ಸೇರಿವೆ.
ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ಮುಂದಿನ ಶೈಕ್ಷಣಿಕ ವರ್ಷದಿಂದ ಕೆಪಿಎಸ್ ಶಾಲೆಗಳಿಗೆ ಸರ್ಕಾರಿ ವಾಹನ ವ್ಯವಸ್ಥೆ ಕಲ್ಪಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.